ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರಸಕ್ತ ಸಾಲಿನ ಯುಜಿ–ನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909 ಅಭ್ಯರ್ಥಿಗಳ ನೀಟ್ ರ‍್ಯಾಂಕ್ ಮತ್ತು ಪಡೆದ ಅಂಕಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
‘ಅತಿ ಹೆಚ್ಚು ಅಂದರೆ 670 ಅಂಕ ಪಡೆದ ಅಭ್ಯರ್ಥಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿ ಇದ್ದಾರೆ. 113 ಅಂಕ ಪಡೆದ ಅಭ್ಯರ್ಥಿ ಕೊನೆಯಲ್ಲಿ ಇದ್ದು, ಅವರು ಕೂಡ ಅರ್ಹತೆ ಪಡೆದಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಕೊಟ್ಟ ಪಟ್ಟಿಯನ್ನು ಜಾಲತಾಣದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
‘ನೀಟ್ ರೋಲ್ ನಂಬರ್ ನಮೂದಿಸಿ, ನೀಟ್ ಕೌನ್ಸೆಲಿಂಗ್‌ಗೆ ನೋಂದಣಿ ಮಾಡಿಕೊಳ್ಳಲು ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ಹಾಗೆಯೇ ನೀಟ್‌ನಲ್ಲಿ ಅರ್ಹತೆ ಪಡೆದು, ಇದುವರೆಗೂ ಅರ್ಜಿಯನ್ನೇ ಸಲ್ಲಿಸದಿರುವವರಿಗೂ ನೋಂದಣಿಗೆ ಅವಕಾಶ ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.