ADVERTISEMENT

NEET Option Entry: ಜುಲೈ 22 ಕೊನೆ ದಿನ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 15:25 IST
Last Updated 19 ಜುಲೈ 2025, 15:25 IST
<div class="paragraphs"><p>ನೀಟ್&nbsp;</p></div>

ನೀಟ್ 

   

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಆಯ್ಕೆಗಳನ್ನು (ಇಚ್ಛೆ) ದಾಖಲಿಸುವ ಪ್ರಕ್ರಿಯೆ ಶನಿವಾರ ಆರಂಭವಾಗಿದ್ದು, ಇದೇ 22ರಂದು ಸಂಜೆ 6ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಸೀಟ್ ಮ್ಯಾಟ್ರಿಕ್ಸ್ ಬಂದ ನಂತರ ಅದನ್ನು ಪರಿಶೀಲಿಸಿ ಅಪ್ ಲೋಡ್ ಮಾಡಲಾಗಿದೆ. ಎಚ್ಚರಿಕೆಯಿಂದ ಆಪ್ಷನ್ಸ್ ದಾಖಲಿಸಬೇಕು ಎಂದು ಅಭ್ಯರ್ಥಿಗಳಿಗೆ ಅವರು ಸಲಹೆ ನೀಡಿದ್ದಾರೆ.

ADVERTISEMENT

‘ಪ್ರಸಕ್ತ ಸಾಲಿನ ಶುಲ್ಕದ ವಿವರಗಳು ಇನ್ನೂ ಪ್ರಾಧಿಕಾರಕ್ಕೆ ಬಂದಿರದ ಕಾರಣ 2024-25ನೇ ಸಾಲಿನ ಶುಲ್ಕದ ವಿವರಗಳನ್ನೇ ಸದ್ಯಕ್ಕೆ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಸರ್ಕಾರದಿಂದ ಪರಿಷ್ಕೃತ ಶುಲ್ಕ ಮಾಹಿತಿ ಬಂದ ನಂತರ ಅದನ್ನು ಅಪ್‌ಡೇಟ್ ಮಾಡಲಾಗುವುದು’ ಎಂದು ಅವರು ವಿವರಿಸಿದ್ದಾರೆ.

‘ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಯೋಗ ಮತ್ತು ನ್ಯಾಚುರೋಪಥಿ ಕೋರ್ಸ್‌ಗಳ ಸೀಟ್ ಮ್ಯಾಟ್ರಿಕ್ಸ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಆ ಕೋರ್ಸ್‌ಗಳಿಗೆ ಆಪ್ಷನ್ ಎಂಟ್ರಿಗೆ ಬಿಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.