ADVERTISEMENT

ನೆಲೋಗಿ ಠಾಣೆ ಪಿಎಸ್ಐ ಜನ್ಮದಿನ: ಅಭಿಮಾನಿಗಳಿಂದ ಹಾಲಿನ ಅಭಿಷೇಕ!, ವಿಡಿಯೊ ವೈರಲ್

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 7:05 IST
Last Updated 15 ಜೂನ್ 2020, 7:05 IST
ನೆಲೋಗಿ ಪೊಲೀಸ್ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ
ನೆಲೋಗಿ ಪೊಲೀಸ್ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ   

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆ ಪಿಎಸ್ಐ ಮಲ್ಲಣ್ಣ ಯಲಗೋಡ ಅವರ ಜನ್ಮದಿನದ ‌ಪ್ರಯುಕ್ತ ಜೂನ್ 13ರಂದು ಅವರ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ.

ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೊರೊನಾ ವೈರಾಣು ‌ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಸಂದರ್ಭದಲ್ಲಿ ದೈಹಿಕ ‌ಅಂತರ ಮರೆತು, ಮಾಸ್ಕ್ ಸಹ ಹಾಕಿಕೊಳ್ಳದೇ ಸರ್ಕಾರಿ ಅಧಿಕಾರಿಯೇ ಜನ್ಮದಿನ‌ ಆಚರಿಸಿಕೊಂಡಿರುವುದಕ್ಕೆ ಟೀಕೆ ವ್ಯಕ್ತವಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.