ಸಿ.ಎಂ
ಬೆಂಗಳೂರು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ನೇಪಾಳದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಕಾರಣ ನೇಪಾಳ ದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ. ನೇಪಾಳಕ್ಕೆ ಹೋಗಿದ್ದ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಮುಖ್ಯಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಸಚಿವಾಲಯದ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.