ಕಠ್ಮಂಡು: ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದು ಪೋಸ್ಟ್ ತಿಳಿಸಿದೆ.
ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
ಹಿನ್ನೆಲೆ
ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಗಳನ್ನು ನಿಷೇಧಿಸಿದ ಕ್ರಮ ವಿರೋಧಿಸಿ ಹಾಗೂ ಭ್ರಷ್ಟಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕನ್ನಡಿಗರು ಸೇರಿದಂತೆ ಭಾರತದ ಹಲವು ಮಂದಿ ನೇಪಾಳದ ಕಠ್ಮಂಡು ವಿಮಾನ ನಿಲ್ದಾನದಲ್ಲಿ ಸಿಲುಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.