ADVERTISEMENT

ನೇತ್ರಾವತಿ–ಹೇಮಾವತಿ ಜೋಡಣೆ ಕಾರ್ಯಸಾಧುವಲ್ಲ; ಕೇಂದ್ರ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 15:51 IST
Last Updated 5 ಫೆಬ್ರುವರಿ 2026, 15:51 IST
ಉಪ್ಪಿನಂಗಡಿಯಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ
ಉಪ್ಪಿನಂಗಡಿಯಲ್ಲಿ ಹರಿಯುತ್ತಿರುವ ನೇತ್ರಾವತಿ ನದಿ   

ನವದೆಹಲಿ: ಎತ್ತಿನಹೊಳೆ ಯೋಜನೆ ಅನುಷ್ಠಾನದ ನಂತರ ನೇತ್ರಾವತಿ ಜಲಾನಯನ ಪ್ರದೇಶದಲ್ಲಿ ಹೆಚ್ಚುವರಿ ನೀರು ಲಭ್ಯವಿಲ್ಲದ ಕಾರಣ ನೇತ್ರಾವತಿ-ಹೇಮಾವತಿ ಜೋಡಣೆ ಕೈಬಿಡಬಹುದು ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಗುರುವಾರ ಹೇಳಿದ್ದಾರೆ.

ನೇತ್ರಾವತಿ-ಹೇಮಾವತಿ ಜೋಡಣೆಯ ಪೂರ್ವ-ಕಾರ್ಯಸಾಧ್ಯತಾ ವರದಿ 1994ರಲ್ಲಿ ಪೂರ್ಣಗೊಂಡಿದ್ದರೂ ನಂತರ ಯಾವುದೇ ಹೆಚ್ಚಿನ ಅಧ್ಯಯನಗಳನ್ನು ಕೈಗೊಳ್ಳಲಾಗಿಲ್ಲ. 2014ರಲ್ಲಿ ಎತ್ತಿನಹೊಳೆ ಯೋಜನೆ ಅನುಷ್ಠಾನದ ನಂತರ ನೇತ್ರಾವತಿ ಜಲಾನಯನ ಪ್ರದೇಶದಲ್ಲಿ ಯಾವುದೇ ಹೆಚ್ಚುವರಿ ನೀರು ಲಭ್ಯವಿಲ್ಲ ಎಂದು ಸಚಿವರು ಲೋಕಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಈ ಬಗ್ಗೆ ಪ‍್ರಶ್ನೆ ಕೇಳಿದ್ದರು. 

ಬೇಡ್ತಿ-ವರದಾ ನದಿ ಜೋಡಣೆ ಸಂಬಂಧ ರಾಜ್ಯ ಸರ್ಕಾರಕ್ಕೆ ಪೂರ್ವ ಕಾರ್ಯಸಾಧ್ಯತಾ ವರದಿ ಸಲ್ಲಿಸಲಾಗಿದೆ. ಕೃಷ್ಣಾ (ಆಲಮಟ್ಟಿ)– ಪೆನ್ನಾರ್ ನದಿ ಜೋಡಿಸಲು 2025ರ ಸೆ‍ಪ್ಟೆಂಬರ್‌ನಲ್ಲಿ ವಿವರವಾದ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.