
ಪ್ರಜಾವಾಣಿ ವಾರ್ತೆ
ಮಧುಸೂದನ್ ಆರ್.ನಾಯ್ಕ್
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್ ಆರ್.ನಾಯ್ಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್ ಆಗಿದ್ದರು.
ಮಧುಸೂದನ್ ಆರ್. ನಾಯ್ಕ್ ಅವರು ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಂಡ ದಿನದಿಂದ ಮುಂದಿನ ಮೂರು ವರ್ಷಗಳವರೆಗೆ ಅಧಿಕಾರ ಅವಧಿ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.