ADVERTISEMENT

ಪಕ್ಷದ ವರಿಷ್ಠರು ಯಾವುದೇ ಷರತ್ತು ವಿಧಿಸಿಲ್ಲ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 15:29 IST
Last Updated 27 ಜುಲೈ 2021, 15:29 IST
ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷದ ಮುಖಂಡರಿಂದ ಅಭಿನಂದನೆ
ಬಸವರಾಜ ಬೊಮ್ಮಾಯಿ ಅವರಿಗೆ ಪಕ್ಷದ ಮುಖಂಡರಿಂದ ಅಭಿನಂದನೆ   

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರ ಮೊದಲ ಪ್ರತಿಕ್ರಿಯೆ ಇಲ್ಲಿದೆ–

'ರಾಜ್ಯದ ಜನ ಬಿಜೆಪಿ ಮೇಲೆ ವಿಶ್ವಾಸ, ನಿರೀಕ್ಷೆ ಇಟ್ಟಿದ್ದಾರೆ. ಪಕ್ಷದ ನಾಯಕರಾದ ಮೋದಿ, ಅಮಿತ್ ಶಾ, ಯಡಿಯೂರಪ್ಪ ನಿರೀಕ್ಷೆ ಇಟ್ಟಿದ್ದಾರೆ ಅದನ್ನು ಈಡೇರಿಸುತ್ತೇನೆ. ಜನರಿಗೋಸ್ಕರ ಜನಪರ ಆಡಳಿತ ನೀಡಿ, ಕರ್ನಾಟಕವನ್ನು ಉನ್ನತ ಮಟ್ಟದ ರಾಜ್ಯವಾಗಿ ರೂಪಿಸುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ.

ಸಾರ್ವಜನಿಕರ ಬಡಜನರ ಸಂಕಷ್ಟ, ಪ್ರವಾಹದಿಂದ ತೊಂದರೆಗೆ ಸಿಲುಕಿರುವ ಜನರ ನಿವಾರಣೆ ಮಾಡಲು ಹಗಲಿರುಳು ಕೆಲಸ ನಿರ್ವಹಿಸುತ್ತೇನೆ. ಹಣಕಾಸಿನ ಸ್ಥಿತಿಯನ್ನು ಉತ್ತಮ ಗೊಳಿಸಲು ಸರ್ವಥಾ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಯಾವುದೇ ಷರತ್ತು ವಿಧಿಸಿಲ್ಲ. ಪಕ್ಷದ ವರಿಷ್ಠರ ಆಶೀರ್ವಾದವೇ ನನಗೆ ಬಲ. ಜನರ ಸೇವೆಯನ್ನು ಮಾಡಲು ಸಕ್ರಿಯವಾಗಿ ತೊಡಗಿಕೊಳ್ಳುತ್ತೇನೆ. ಪಕ್ಷ, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಸರ್ಕಾರ ನೀಡುತ್ತೇನೆ' ಎಂದರು.

ADVERTISEMENT

ಬುಧವಾರ ಬೆಳಿಗ್ಗೆಯೇ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಗೋವಿಂದ ಕಾರಜೋಳ ಅವರು ಬೊಮ್ಮಾಯಿ ಹೆಸರು ಸೂಚಿಸಿದರು. ಸಭೆಯಲ್ಲಿ ಅಧಿಕೃತ ಒಪ್ಪಿಗೆ ದೊರೆತಿಯಿತು. ರಾಜ್ಯಪಾಲರ ಭೇಟಿಗಾಗಿ ಬಸವರಾಜ ಬೊಮ್ಮಾಯಿ ರಾಜಭವನಕ್ಕೆ ಹೊರಟರು.

ಯಡಿಯೂರಪ್ಪ ಅವರು ಬೊಮ್ಮಾಯಿ ಅವರ ಹೆಸರುಸೂಚಿಸಿದ್ದರು.ಕಾರಜೋಳ,ಅಶೋಕ,ಈಶ್ವರಪ್ಪ,ಪೂರ್ಣಿಮಾಅವರು ಶಾಸಕಾಂಗ ಸಭೆಯಲ್ಲಿ ಅನುಮೋದನೆ ನೀಡಿದರು.

ಇನ್ನಷ್ಟು ಓದು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.