ADVERTISEMENT

ನೂತನ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 6:02 IST
Last Updated 11 ಜುಲೈ 2021, 6:02 IST
ನೂತನ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದ ಥಾವರಚಂದ್ ಗೆಹಲೋತ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ (ಎಡ) ಹಾಗೂ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ (ಬಲ) ಚಿತ್ರದಲ್ಲಿದ್ದಾರೆ.

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರಚಂದ್ ಗೆಹಲೋತ್ ಅವರು ಭಾನುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ‌ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಿದರು. ಗೆಹಲೋತ್ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ಗೆಹಲೋತ್ ಅವರು ರಾಜ್ಯದ 19ನೇ ರಾಜ್ಯಪಾಲರು. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿದ್ದ ಅವರನ್ನು ರಾಜ್ಯದ ನೂತನ ರಾಜ್ಯಪಾಲರನ್ನಾಗಿ ನೇಮಕ‌ ಮಾಡಲಾಗಿತ್ತು.

ಥಾವರಚಂದ್ ಗೆಹಲೋತ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.