ADVERTISEMENT

ನೂತನ ನ್ಯಾಯಮೂರ್ತಿ ಅನು ಶಿವರಾಮನ್‌ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2024, 16:24 IST
Last Updated 21 ಮಾರ್ಚ್ 2024, 16:24 IST
ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಅನು ಶಿವರಾಮನ್ ಅವರಿಗೆ ಗುರುವಾರ ರಾಜಭವನದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಪ್ರಮಾಣ ವಚನ ಬೋಧಿಸಿದ ನಂತರ ಹೂಗುಚ್ಛ ನೀಡಿ ಶುಭ ಕೋರಿದರು. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಇದ್ದರು. 

ಬೆಂಗಳೂರು: ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಅನು ಶಿವರಾಮನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್‌ ಗೆಹಲೋತ್‌, ನ್ಯಾಯಮೂರ್ತಿ ಅನು ಶಿವರಾಮನ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ADVERTISEMENT

ಅನು ಶಿವರಾಮನ್‌ 1996ರ ಮೇ 25ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ್ದು, 1991ರಲ್ಲಿ ಎರ್ನಾಕುಲಂ ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದಾರೆ. 1991ರ ಮಾರ್ಚ್ 9ರಂದು ಸನ್ನದು ನೋಂದಣಿ ಮಾಡಿಸಿ ವೃತ್ತಿ ಆರಂಭಿಸಿದ್ದರು. 2015ರ ಏಪ್ರಿಲ್ 10ರಂದು ಕೇರಳ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2017ರ ಏಪ್ರಿಲ್‌ 5ರಂದು ಕಾಯಂಗೊಂಡಿದ್ದರು. ಸದ್ಯ ಕರ್ನಾಟಕ ಹೈಕೋರ್ಟ್‌ ಹಾಲ್‌-2ರಲ್ಲಿ ಕಲಾಪ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.