
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸಿದರೆ ತಾವು ಹೊಸ ಪಕ್ಷ ಕಟ್ಟುವುದಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರ ಮನೆಗೆ ಶುಕ್ರವಾರ ಬಂದಿದ್ದ ಯತ್ನಾಳ ಅವರು ಸುದ್ದಿಗಾರರ ಜತೆ ಮಾತನಾಡಿದರು. ಯತ್ನಾಳ ಅವರು ಬಿಜೆಪಿಯಿಂದ ಉಚ್ಛಾಟನೆಗೊಂಡ ಬಳಿಕ ನಡೆಸಿದ ಭಿನ್ನರ ಬಣದ ಮೊದಲ ಸಭೆ ಇದಾಗಿದೆ.
‘ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರಿಸಬಾರದು’ ಎಂದು ಒತ್ತಾಯಿಸಿದರು. ಶಾಸಕ ರಮೇಶ ಜಾರಕಿಹೊಳಿ ಅವರೂ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.