ADVERTISEMENT

ನಿಖಿಲ್‌ಗೆ ಹೊಸ ಜವಾಬ್ದಾರಿ: ಎಚ್‌.ಡಿ.ದೇವೇಗೌಡ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2025, 16:09 IST
Last Updated 8 ಮಾರ್ಚ್ 2025, 16:09 IST
<div class="paragraphs"><p>ಎಚ್‌.ಡಿ.ದೇವೇಗೌಡ (ಸಂಗ್ರಹ ಚಿತ್ರ)</p></div>

ಎಚ್‌.ಡಿ.ದೇವೇಗೌಡ (ಸಂಗ್ರಹ ಚಿತ್ರ)

   

ಬೆಂಗಳೂರು: ‘ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೊಸ ಜವಾಬ್ದಾರಿ ನೀಡುತ್ತಿದ್ದೇವೆ. ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷವನ್ನು ಕಟ್ಟಬೇಕು. ಮಹಿಳಾ ಸಮಾವೇಶಗಳನ್ನು ನಡೆಸಬೇಕು’ ಎಂದು ಜೆಡಿಎಸ್‌ ಮುಖ್ಯಸ್ಥ ಎಚ್‌.ಡಿ.ದೇವೇಗೌಡ ಹೇಳಿದರು.

ಪಕ್ಷದ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಪಕ್ಷದ ವತಿಯಿಂದ ಕನಿಷ್ಠ 50 ಮಹಿಳಾ ಸಮಾವೇಶಗಳನ್ನು ನಡೆಸಬೇಕು. ಅದಕ್ಕೆ ಬೇಕಿರುವ ಹಣವನ್ನು ಭಿಕ್ಷೆ ಬೇಡಿಯಾದರೂ ತರುತ್ತೇವೆ. ಸಮಾವೇಶ ನಡೆಸಬೇಕು’ ಎಂದು ನಿಖಿಲ್‌ ಅವರನ್ನು ಉದ್ದೇಶಿಸಿ ಹೇಳಿದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಸಬಲೀಕರಣಕ್ಕೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ನಾವೂ ಮಹಿಳಾ ಸಬಲೀಕರಣಕ್ಕೆ ದುಡಿಯಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ 80 ಮಹಿಳೆಯರು ಚುನಾವಣೆಗೆ ನಿಲ್ಲಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.