ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಬಳಿ ಶನಿವಾರ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಂಬಾಳೆ ಬಿಡಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಪಿ.ಎಂ.ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಜಿಲ್ಲಾಧಿಕಾರಿ ಕುಮಾರ, ಸಚಿವ ಎನ್.ಚಲುವರಾಯಸ್ವಾಮಿ ಪಾಲ್ಗೊಂಡಿದ್ದರು
–ಪ್ರಜಾವಾಣಿ ಚಿತ್ರ
ಶಿವನಸಮುದ್ರ (ಮಂಡ್ಯ ಜಿಲ್ಲೆ): ‘ರಾಜ್ಯದಲ್ಲಿ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪ್ರವಾಸೋದ್ಯ ಮಕ್ಕೆ ಉತ್ತೇಜನ ನೀಡುವಂಥ ಹೊಸನೀತಿ ರೂಪಿಸುವುದಕ್ಕೂ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತದ ಸಹಯೋಗದಲ್ಲಿ ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿಯಲ್ಲಿ ಶನಿವಾರ ಎರಡು ದಿನದ ‘ಗಗನಚುಕ್ಕಿ ಜಲಪಾತೋತ್ಸವ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಮಂಡ್ಯ, ಮೈಸೂರು, ಬೆಳಗಾವಿ, ಮಂಗಳೂರು, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಲ್ಲಿರುವ ನೈಸರ್ಗಿಕ ತಾಣಗಳನ್ನು ಅಭಿವೃದ್ಧಿಪಡಿಸಲು ಪೂರಕವಾದ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು’ ಎಂದರು.
‘ಗಗನಚುಕ್ಕಿ ಜಲಪಾತ ತಾಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಇದುವರೆಗೆ ₹8 ಕೋಟಿಗೂ ಹೆಚ್ಚು ಅನುದಾನ ನೀಡಿದೆ. ಮುಂದಿನ ದಿನಗಳಲ್ಲಿ ಗಗನಚುಕ್ಕಿ–ಭರಚುಕ್ಕಿ ತಾಣಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.