ADVERTISEMENT

ನೂತನ ಪ್ರವಾಸೋದ್ಯಮ ನೀತಿ ಶೀಘ್ರ ಜಾರಿ: ಸಚಿವ ಎಚ್‌.ಕೆ. ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 15:30 IST
Last Updated 22 ನವೆಂಬರ್ 2023, 15:30 IST
<div class="paragraphs"><p>ಎಚ್‌.ಕೆ. ಪಾಟೀಲ</p></div>

ಎಚ್‌.ಕೆ. ಪಾಟೀಲ

   

ವಿಜಯಪುರ: ರಾಜ್ಯ ಸರ್ಕಾರ ನೂತನ ಪ್ರವಾಸೋದ್ಯಮ ನೀತಿ ರೂಪಿಸುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಜಾರಿಗೆ ತರಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಪ್ರವಾಸೋದ್ಯಮ ನೀತಿಯಲ್ಲಿ ಶೈಕ್ಷಣಿಕ ಮತ್ತು ಕೃಷಿ ಪ್ರವಾಸ ಹಾಗೂ ಬಡ ಮಧ್ಯಮ ವರ್ಗದವರಿಗೆ ಬೇಸರ ಕಳೆಯಲು ವಾರಾಂತ್ಯ ಪ್ರವಾಸ ಏರ್ಪಡಿಸುವ ಬಗ್ಗೆ ಒತ್ತು ನೀಡಲಾಗುವುದು ಎಂದರು.

ADVERTISEMENT

ಐತಿಹಾಸಿಕ ಸ್ಮಾರಕಗಳಿರುವ ವಿಜಯಪುರ ನಗರವನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳವಾಗಿ (ವರ್ಲ್ಡ್ ಹೆರಿಟೇಜ್ ಸೈಟ್) ಮಾಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ತಿಳಿಸಿದರು.

ವಿಜಯಪುರದಲ್ಲಿ ಆದಿಲ್‌ ಶಾಹಿಗಳ ಕಾಲದ ಐತಿಹಾಸಿಕ ಸ್ಮಾರಕಗಳ ನಿರ್ವಹಣೆ, ಮೂಲಸೌಲಭ್ಯ, ಸ್ವಚ್ಛತೆ ಕಾಪಾಡುವ ವಿಷಯವಾಗಿ ಸ್ಮಾರಕ ದತ್ತು ಯೋಜನೆ ರೂಪಿಸಲಾಗಿದೆ. ಆಸಕ್ತ ಸಂಘ, ಸಂಸ್ಥೆ, ವ್ಯಕ್ತಿಗಳು ಮುಂದೆ ಬಂದರೆ ಸ್ಮಾರಕಗಳನ್ನು ದತ್ತು ನೀಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.