ADVERTISEMENT

ಹೊಸ ವಿ.ವಿ. ಸ್ಥಾಪನೆಗೆ ಕಡಿವಾಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2019, 19:45 IST
Last Updated 16 ಜೂನ್ 2019, 19:45 IST

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು, ಮೂಲಸೌಲಭ್ಯ ಅಭಿವೃದ್ಧಿ, ಹೊಸ ವಿಶ್ವವಿದ್ಯಾಲಯಗಳಲ್ಲಿ ನಡೆಯದ ಅಧಿಕ ಪ್ರವೇಶಾತಿ ಮೊದಲಾದ ಕಾರಣಗಳನ್ನು ಪರಿಗಣಿಸಿ, ರಾಜ್ಯದಲ್ಲಿ ಸದ್ಯ ಹೊಸ ವಿಶ್ವವಿದ್ಯಾಲಯಗಳನ್ನು ತೆರೆಯದೆ ಇರಲು ಸರ್ಕಾರ ನಿರ್ಧರಿಸಿದೆ.

ಇಲ್ಲಿ ಈಚೆಗೆ ನಡೆದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ (ಕೆಎಸ್‌ಎಚ್‌ಇಸಿ) ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಜನರ ಮುಂದಿಟ್ಟಿರುವ ಹೊಸ ಶಿಕ್ಷಣ ನೀತಿಯಲ್ಲಿ ತಿಳಿಸಿರುವ ಕೆಲವೊಂದು ನಿಯಮಗಳು ಸಹ ರಾಜ್ಯ ಸರ್ಕಾರ ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣ ಎನ್ನಲಾಗಿದೆ.

ಮಂಡಳಿಯ ಸಭೆಯಲ್ಲಿ ಹಲವು ವಿಶ್ವವಿದ್ಯಾಲಯಗಳ ಕುಲಪತಿಗಳು ಮತ್ತು ಶಿಕ್ಷಣ ತಜ್ಞರು ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತ ವಿಶ್ವವಿದ್ಯಾಲಯ, ಜಾನಪದ ವಿಶ್ವವಿದ್ಯಾಲಯ, ಕೃಷ್ಣದೇವರಾಯ ವಿಶ್ವವಿದ್ಯಾಲಯ, ದಾವಣಗೆರೆ ವಿಶ್ವವಿದ್ಯಾಲಯಗಳಿಗೆ ಹಣಕಾಸಿನ ಕೊರತೆಯಿಂದಾಗಿ, ಅಲ್ಲಿನ ಶಿಕ್ಷಣ ಗುಣಮಟ್ಟದ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿ ಹೊಸ ವಿಶ್ವವಿದ್ಯಾಲಯಗಳನ್ನು ತೆರೆಯದೆ ಇರಲು ನಿರ್ಧರಿಸಲಾಗಿದೆ ಎಂದು ಕುಲಪತಿಯೊಬ್ಬರು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.