ADVERTISEMENT

ಮಂಗನ ಕಾಯಿಲೆ ತಡೆಗೆ ಶೀಘ್ರದ ಹೊಸ ಲಸಿಕೆ: ಸಚಿವ ದಿನೇಶ್ ಗುಂಡೂರಾವ್

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2023, 13:59 IST
Last Updated 11 ಡಿಸೆಂಬರ್ 2023, 13:59 IST
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್   

ವಿಧಾನ ಪರಿಷತ್‌: ‘ಮಂಗನ ಕಾಯಿಲೆ (ಕೆಎಫ್‌ಡಿ) ತಡೆಗೆ ಶೀಘ್ರ ಹೊಸ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬಿಜೆಪಿಯ ಬಿ.ಎಸ್. ಅರುಣ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ‘ಮಲೆನಾಡಿನ ಜನರನ್ನು ಕಾಡುತ್ತಿರುವ ಕೆಎಫ್‌ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ. ಹೀಗಾಗಿ, ಐಸಿಎಂಆರ್ ಜೊತೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಯುತ್ತಿದೆ’ ಎಂದರು.

‘ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಲಸಿಕೆ ವಿತರಣೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪನಿಯ ಸಹಯೋಗದೊಂದಿಗೆ ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ’  ಎಂದು ಹೇಳಿದರು.

ADVERTISEMENT

‘ಮಂಗನ ಕಾಯಿಲೆ ಅತೀ ಕಡಿಮೆ ಜನರಿಗೆ ಬಾಧಿಸುತ್ತಿರುವ ಕಾರಣದಿಂದ ಕಂಪನಿಗಳು ಲಸಿಕೆ ಕಂಡುಹಿಡಿಯಲು ಮುಂದಾಗುತ್ತಿಲ್ಲ. ಆದರೂ, ಸರ್ಕಾರ ಸಂಶೋಧನೆಗೆ ಧನ ಸಹಾಯ ನೀಡುವುದಾಗಿ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆಯನ್ನು ರೋಗಿಗಳಿಗೆ ನೀಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.