
ಪ್ರಜಾವಾಣಿ ವಾರ್ತೆ
ಬೆಂಗಳೂರು: ಹೊಸ ವರ್ಷ ಆಚರಣೆ ವೇಳೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಇತರ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆ ಇರುವುದರಿಂದ ಎಲ್ಲಾ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಯ ಸೇವೆ ಒದಗಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ತುರ್ತು ಕರ್ತವ್ಯಕ್ಕಾಗಿ ಜಿಲ್ಲಾ ಮಟ್ಟದ ಎಲ್ಲ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗಾಗಿ ಮಹಿಳಾ ಸಿಬ್ಬಂದಿಯನ್ನೇ ನಿಯೋಜಿಸಬೇಕು. ಆಂಬುಲೆನ್ಸ್ ಅನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು ಹಾಗೂ ಔಷಧಗಳು ಲಭ್ಯ ಇರುವಂತೆ ನೋಡಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.