ADVERTISEMENT

ಸಿದ್ದರಾಮಯ್ಯ ಶಕ್ತಿ ಕುಗ್ಗಿಲ್ಲ: ಸಚಿವ ನಾಗರಾಜ್‌

​ಪ್ರಜಾವಾಣಿ ವಾರ್ತೆ
Published 29 ಜೂನ್ 2019, 10:28 IST
Last Updated 29 ಜೂನ್ 2019, 10:28 IST
ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣ ಕಾಮಗಾರಿಯನ್ನು ವಸತಿ ಸಚಿವ ಎಂ.ಟಿ.ಬಿ. ನಾಗರಾಜ್‌ ಶನಿವಾರ ವೀಕ್ಷಿಸಿದರು 
ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣ ಕಾಮಗಾರಿಯನ್ನು ವಸತಿ ಸಚಿವ ಎಂ.ಟಿ.ಬಿ. ನಾಗರಾಜ್‌ ಶನಿವಾರ ವೀಕ್ಷಿಸಿದರು    

ಮಡಿಕೇರಿ: ‘ಮೈತ್ರಿ’ ಸರ್ಕಾರದ ಸಮನ್ವ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಶಕ್ತಿ ಕುಗ್ಗಿಲ್ಲ ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್ ಇಲ್ಲಿ ಶನಿವಾರ ಹೇಳಿದರು.

ಸೋಮವಾರಪೇಟೆ ತಾಲ್ಲೂಕಿನ ಜಂಬೂರಿನಲ್ಲಿ ನೆರೆ ಸಂತ್ರಸ್ತರ ಮನೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ನಂತರ ಮಾತನಾಡಿ, ‘ಸಿದ್ದರಾಮಯ್ಯ ತಮ್ಮ ಕ್ಷೇತ್ರವಾದ ಬಾದಾಮಿಯ ಅಭಿವೃದ್ಧಿಯತ್ತ ಗಮನ ಹರಿಸಿದ್ದಾರೆ. ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ. ತಮ್ಮ ಐದು ವರ್ಷದ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿದ್ದರು. ರಾಜ್ಯ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಅವರೂ ಒಬ್ಬರು. ಅಭಿವೃದ್ಧಿ ಕೆಲಸಗಳನ್ನು ಜನರು ಈಗಲೂ ಮೆಲುಕು ಹಾಕುತ್ತಿದ್ದಾರೆ. ಅವರ ಶಕ್ತಿ, ಸೌಂಡು ಕಡಿಮೆಯಾಗಿಲ್ಲ’ ಎಂದು ಹೊಗಳಿದರು.

‘ಮೈತ್ರಿ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಒಟ್ಟಾಗಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಗ್ರಾಮಗಳ ವಾಸ್ತವ ಸ್ಥಿತಿ ಅರಿಯಲು ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಮುಖಂಡರು ಎಲ್ಲ ವಿಚಾರಕ್ಕೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ಜುಲೈ ಅಂತ್ಯಕ್ಕೆ ಸೂರು:ಕೊಡಗು ನೆರೆ ಸಂತ್ರಸ್ತರಿಗೆ ಕರ್ಣಂಗೇರಿ ಹಾಗೂ ಮದೆ ಗ್ರಾಮದಲ್ಲಿ ನಿರ್ಮಿಸಿರುವ ಮನೆಗಳನ್ನು ಜುಲೈ ಅಂತ್ಯಕ್ಕೆ ಹಸ್ತಾಂತರ ಮಾಡಲಾಗುವುದು ಎಂದು ನಾಗರಾಜ್‌ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.