ADVERTISEMENT

ಎಸ್ಸೆಸ್ಸೆಲ್ಸಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 2 ಮೇ 2019, 15:25 IST
Last Updated 2 ಮೇ 2019, 15:25 IST
ವಿದ್ಯಾರ್ಥಿ ಭುವನ್ 
ವಿದ್ಯಾರ್ಥಿ ಭುವನ್    

ಸೋಮವಾರಪೇಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕಾಫಿ ಎಸ್ಟೇಟ್‌ವೊಂದರಲ್ಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿರುವ ಅರ್ಜುನ್ ಅವರ ಪುತ್ರ ಭುವನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ಪರೀಕ್ಷೆ ಬರೆದಿದ್ದ. ಫಲಿತಾಂಶ ಬಂದ ಮೇಲೆ ಮಾನಸಿಕವಾಗಿ ನೊಂದು ಹೋಗಿದ್ದ ಎನ್ನಲಾಗಿದೆ. ಸೋಮವಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.