ADVERTISEMENT

News Express: ಪಾನಿಪುರಿ, ಕಬಾಬ್ ಖಾದ್ಯಗಳ ಕೃತಕ ಬಣ್ಣಕ್ಕೆ ನಿಷೇಧ

News Express

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2024, 16:06 IST
Last Updated 11 ಮಾರ್ಚ್ 2024, 16:06 IST

ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುವುದು. ಬಣ್ಣ ರಹಿತ ಕಾಟನ್ ಕ್ಯಾಂಡಿ ತಯಾರಿಕೆಗೆ ನಿರ್ಬಂಧ ಇರುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಕಾಟನ್ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್– ಬಿಯನ್ನು ಬಳಸಲಾಗುತ್ತದೆ. ಇದನ್ನು ಆಹಾರದಲ್ಲಿ ಬಳಸುವುದಕ್ಕೆ ನಿಷೇಧವಿದೆ. ಇದು ಕ್ಯಾನ್ಸರ್‌ಗೆ ಕಾರಣವಾಗುವ ಅಂಶವನ್ನು ಹೊಂದಿದೆ ಎಂದು ಅವರು ಸೋಮವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು. ಬೀದಿ ಬದಿಯ ತಳ್ಳ ಗಾಡಿ ವ್ಯಾಪಾರಿಗಳಿಂದ ಹಿಡಿದು ಪಂಚ ತಾರಾ ಹೋಟೆಲ್‌ವರೆಗೂ ಆದೇಶ ಅನ್ವಯವಾಗುತ್ತದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಆಹಾರ ಪದಾರ್ಥಗಳನ್ನು ತಯಾರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ದಂಡ ಮತ್ತು ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ ಎಂದು ದಿನೇಶ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.