ಚುನಾವಣಾ ಬಾಂಡ್ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೆಗೆದುಕೊಂಡ ನಿರ್ಣಯದಿಂದ ಮೋದಿ ಅವರ ನೈತಿಕತೆಯ ಮುಖವಾಡ ಕಳಚಿಬಿದ್ದಿದೆ' ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, 'ಮೋದಿಯವರು, 'ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ" ಎಂದು ಹೇಳಿಕೊಳ್ಳುತ್ತಾ ಹುಸಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದರು. ಆ ಹುಸಿ ವರ್ಚಸ್ಸಿಗೆ ಈಗ ಸರಿಯಾದ ಹೊಡೆತ ಬಿದ್ದಿದೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.