ADVERTISEMENT

ನಮ್ಮಲ್ಲೂ ಉರಿಗೌಡ, ನಂಜೇಗೌಡರ ಖಡ್ಗ ಇದೆ: ಸಿಟಿ ರವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಅಕ್ಟೋಬರ್ 2023, 15:20 IST
Last Updated 3 ಅಕ್ಟೋಬರ್ 2023, 15:20 IST

‘ಟಿಪ್ಪು ಸುಲ್ತಾನ್ ಖಡ್ಗ ಅಳವಡಿಸುತ್ತೀರಾ? ಆ ಟಿಪ್ಪು ಕೊಂದ ನಮ್ಮ ಉರಿಗೌಡ, ನಂಜೇಗೌಡರ ಬಳಿಯೂ ಖಡ್ಗ ಇತ್ತು. ಹಾಗೇ ಹನುಮನ ಗದೆ, ಕೃಷ್ಣನ ಸುದರ್ಶನ ಚಕ್ರ, ಶಿವನ ತ್ರಿಶೂಲ ಹೊರ ತೆಗೆಯಬೇಕಾಗುತ್ತದೆ’ ಎಂದು ಮಾಜಿ ಸಚಿವ ಸಿ.ಟಿ.ರವಿ ಎಚ್ಚರಿಕೆ ನೀಡಿದರು. ಕೋಲಾರದಲ್ಲಿ ಮಂಗಳವಾರ ಮಾತನಾಡಿದ ಅವರು, ಈ‌ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನನಗೆ ಅವಕಾಶ ಕೊಡದಂತೆ ತಡೆಹಿಡಿಯಲು ಪ್ರಯತ್ನ ನಡೆದಿತ್ತು‌. ಕೋಲಾರ ಏನು ಪಾಕಿಸ್ತಾನದಲ್ಲಿಯೇ? ಜಿಲ್ಲಾಧಿಕಾರಿ ಅಕ್ರಂ ಪಾಷ ನವಾಜ್ ಷರೀಫ್ ತಮ್ಮನೋ, ಮಗನೋ? ನಾನು ಕೋಲಾರಕ್ಕೆ ಬರಬಾರದೆಂದು ಹೇಳಲು ಇವನ್ಯಾರು? ನಾನು ಬಾಂಬ್ ಹಾಕಿಲ್ಲ. ತಾಲಿಬಾನಿಯೂ ಅಲ್ಲ’ ಎಂದು ಹರಿಹಾಯ್ದರು. ಇದರೊಂದಿಗೆ, ದಿನದ ಪ್ರಮುಖ ವಿದ್ಯಮಾನಗಳ ವಿವರ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.