ADVERTISEMENT

ಸೌಜನ್ಯ ಕೊಲೆ ಪ್ರಕರಣ: ಮಾಧ್ಯಮ ನಿರ್ಬಂಧ ತೆರವು ಕೋರಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 19:27 IST
Last Updated 6 ಆಗಸ್ಟ್ 2025, 19:27 IST
<div class="paragraphs"><p>ಹೈಕೋರ್ಟ್ </p></div>

ಹೈಕೋರ್ಟ್

   

ಬೆಂಗಳೂರು: ‘ಸೌಜನ್ಯ ಕೊಲೆ, ಆಕೆಯ ಮೇಲಿನ ಅತ್ಯಾಚಾರ ಆರೋಪ ಹಾಗೂ ಧರ್ಮಸ್ಥಳದಲ್ಲಿ ಕಾನೂನು ಬಾಹಿರವಾಗಿ ನೂರಾರು ಶವಗಳನ್ನು ದಫನ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ ನಮ್ಮ ವಿರುದ್ಧ ಸೆಷನ್ಸ್‌ ನ್ಯಾಯಾಲಯ ವಿಧಿಸಿರುವ ಪ್ರತಿಬಂಧಕ ಆದೇಶ ರದ್ದುಗೊಳಿಸಬೇಕು’ ಎಂದು ಕೋರಿ ‘ನ್ಯೂಸ್‌ ಮಿನಿಟ್‌ ವೆಬ್‌ ಪೋರ್ಟ್‌ಲ್‌’ ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ಕುರಿತಂತೆ, ‘ಸ್ಪಂಕ್‌ಲೇನ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ’ ನಿರ್ದೇಶಕ ವಿಘ್ನೇಶ್‌ ವೆಲ್ಲೂರು ಸಲ್ಲಿಸಿರುವ ರಿಟ್‌ ಅರ್ಜಿಯು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಇದೇ 11ರಂದು ವಿಚಾರಣೆಗೆ ನಿಗದಿಯಾಗಿದೆ. 

ADVERTISEMENT

‘ಮಾಧ್ಯಮ ವರದಿ ನಿರ್ಬಂಧಿಸಿ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ನ 10ನೇ ಹೆಚ್ಚುವರಿ ನ್ಯಾಯಾಲಯ ಈ ಕುರಿತಾದ ಅಸಲು ದಾವೆಯಲ್ಲಿ 2025ರ ಜುಲೈ 18ರಂದು ನೀಡಿರುವ ಪ್ರತಿಬಂಧಕ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯಲ್ಲಿ ಡಿ.ಹರ್ಷೇಂದ್ರಕುಮಾರ್ ಅವರನ್ನು ಪ್ರತಿವಾದಿಯನ್ನಾಗಿ ಕಾಣಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.