ವೈದ್ಯರು
ಸಾಂದರ್ಭಿಕ ಚಿತ್ರ
ನವದೆಹಲಿ: ‘ನನ್ನ ನಿರಂತರ ಪ‍್ರಯತ್ನದಿಂದಾಗಿ ಎನ್‌ಎಚ್‌ಎಂ ಯೋಜನೆಯಡಿ ಗುತ್ತಿಗೆ ಆಧಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ಮತ್ತು ದಾದಿಯರ ವೇತನವು ದೇಶದಾದ್ಯಂತ ಶೇ 25 ರಷ್ಟು ಹೆಚ್ಚಳ ಆಗಿದೆ’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ ತಿಳಿಸಿದ್ದಾರೆ.
‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ಸ್ಟಾಫ್ ನರ್ಸ್‌ಗಳ ಪ್ರಸ್ತುತ ವೇತನ ಹೆಚ್ಚಳ ಮಾಡುವಂತೆ 4-5 ತಿಂಗಳುಗಳಿಂದ ನಿರಂತರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು’ ನನ್ನ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರವು ವೇತನ ಹೆಚ್ಚಳ ಮಾಡಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಈ ಬಗ್ಗೆ ಸಂಸತ್ ಅಧಿವೇಶನ ಸೇರಿದಂತೆ ಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ಸಭೆಯಲ್ಲೂ ವಿಷಯ ಪ್ರಸ್ತಾಪಿಸಿ ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ವೈಯಕ್ತಿಕವಾಗಿ ಈ ಬಗ್ಗೆ ಮನವಿ ಸಲ್ಲಿಸಲಾಗಿತ್ತು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.