ADVERTISEMENT

ಐಪಿಸಿ ಪ್ರಕರಣ ವಿಚಾರಣೆ ನಡೆಸಲೂ ಎನ್‌ಐಎ ಕೋರ್ಟ್‌ಗೆ ಅಧಿಕಾರ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 19:23 IST
Last Updated 9 ಸೆಪ್ಟೆಂಬರ್ 2022, 19:23 IST
ಹೈ ಕೋರ್ಟ್‌
ಹೈ ಕೋರ್ಟ್‌   

ಬೆಂಗಳೂರು: ‘ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸುವ ಎನ್‌ಐಎ ವಿಶೇಷ ಕೋರ್ಟ್‌ಗಳುಭಾರತೀಯ ದಂಡ ಸಂಹಿತೆಯಡಿ (ಐಪಿಸಿ) ಆರೋಪ ಎದುರಿಸುತ್ತಿರುವ ಪ್ರಕರಣಗಳನ್ನೂ ವಿಚಾರಣೆ ನಡೆಸುವ ಅಧಿಕಾರ ಹೊಂದಿವೆ’ ಎಂದು ಹೈಕೋರ್ಟ್ ಆದೇಶಿಸಿದೆ.

‘ನಮ್ಮ ವಿರುದ್ಧ ಕೇವಲ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದರೂ ಎನ್‌ಐಎ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಆದ್ದರಿಂದ, ನಮ್ಮ ವಿರುದ್ಧದ ಪ್ರಕರಣಗಳನ್ನು ಸಾಮಾನ್ಯ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿದ್ದ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಆರೋಪಿ ಸೈಯ್ಯದ್ ಸೊಹೆಲ್ ತೊರವಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ಎನ್‌ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರ ವಾದವನ್ನು ಎತ್ತಿಹಿಡಿದಿರುವ ನ್ಯಾಯಪೀಠ, ‘ಎನ್‌ಐಎ ಕೋರ್ಟ್‌ ಐಪಿಸಿ ಅಡಿಯಲ್ಲಿನ ಆರೋಪಿಗಳ ವಿಚಾರಣೆ ನಡೆಸುವ ಅಧಿಕಾರವನ್ನೂ ಹೊಂದಿವೆ‘ ಎಂದು ಸ್ಪಷ್ಟಪಡಿಸಿದೆ. ನಗರದ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪ್ರದೇಶಗಳಲ್ಲಿ 2020ರ ಆಗಸ್ಟ್ 11ರಂದು ಪೊಲೀಸ್‌ ಠಾಣೆಗಳ ಮೇಲೆ ಉದ್ರಿಕ್ತ ಗುಂಪು ದಾಳಿ ನಡೆಸಿತ್ತು. ಈ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಸೈಯದ್‌ ವಿರುದ್ಧ ಎನ್‌ಐಎ ಮತ್ತು ಯುಎಪಿಎ ಕಾಯ್ದೆಯಡಿ ಆರೋಪ ಪಟ್ಟಿ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.