ಬೆಂಗಳೂರು: ಧರ್ಮಸ್ಥಳದ ಪ್ರಕರಣವನ್ನು ‘ಎನ್ಐಎ‘ಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.1 ರಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿದ್ದು ಧರ್ಮಸ್ಥಳದ ಎಲ್ಲ ಭಕ್ತರು ಇದರಲ್ಲಿ ಭಾಗವಹಿಸಬಹುದು. ಸೆ2 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಪ್ರಕರಣದಲ್ಲಿ ಚಿನ್ನಯ್ಯ ಒಬ್ಬ ನಿಮಿತ್ತ ಮಾತ್ರ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಮಾಡಲು ‘ಎನ್ಐಎ‘ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿದರು.
ಇದರ ಹಿಂದೆ ಷಡ್ಯಂತ್ರ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದು ಬಯಲಿಗೆ ಬರಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.