ADVERTISEMENT

ಕೊಪ್ಪಳದ ಯುವಕನ ಹತ್ಯೆ ತನಿಖೆ ಎನ್‌ಐಎಗೆ ಒಪ್ಪಿಸಿ: ಛಲವಾದಿ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 19:21 IST
Last Updated 6 ಆಗಸ್ಟ್ 2025, 19:21 IST
ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ   

ಬೆಂಗಳೂರು: ‘ಕೊಪ್ಪಳದ ಹಿಂದೂ ಸಂಘಟನೆಯ ಕಾರ್ಯಕರ್ತ ಗವಿಸಿದ್ಧಪ್ಪ ನಾಯಕ ಅವರ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು’ ಎಂದು ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹತ್ಯೆಗಳನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಸರ್ಕಾರದ ಧೋರಣೆಯನ್ನು ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

‘ಸರ್ಕಾರವು ಮತಬ್ಯಾಂಕಿಗಾಗಿ ಮಾಡುತ್ತಿರುವ ಓಲೈಕೆಗಳು ರಾಜ್ಯದ ಜನರ ಪ್ರಾಣಗಳನ್ನು ತೆಗೆದುಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿಯೊಬ್ಬರೂ ಸರ್ಕಾರವನ್ನು ಪ್ರಶ್ನಿಸಬೇಕು. ಹತ್ಯೆಗೀಡಾದ ಯುವಕ ಪರಿಶಿಷ್ಟ ಪಂಗಡಕ್ಕೆ ಸೇರಿದವರು. ಆದ್ದರಿಂದ ಕೊಪ್ಪಳದಲ್ಲಿ ಬಿ.ಶ್ರೀರಾಮುಲು ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಲು ತೀರ್ಮಾನಿಸಲಾಗಿದೆ’ ಎಂದರು.

ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇದನ್ನು ಬಹಳ ದಿನಗಳಿಂದ ಹೇಳುತ್ತಲೇ ಬಂದಿದ್ದೇವೆ. ಆದರೂ ಕೂಡ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.