ನವದೆಹಲಿ: ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ ಹಾಗೂ ಉಗ್ರರ ಚಟುವಟಿಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳದ ಕಚೇರಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮನವಿ ಸಲ್ಲಿಸಿದರು.
ಸಚಿವರ ಕಚೇರಿಯಲ್ಲಿ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ ಅವರು, ‘ಭಟ್ಕಳ, ಕಾಸರಗೋಡಿನಂತಹ ಉಗ್ರ ಚಟುವಟಿಕೆಗಳ ಕೇಂದ್ರಗಳಿಗೆ ಮಂಗಳೂರು ಹತ್ತಿರವಿರುವುದರಿಂದ, ರಾಷ್ಟ್ರ ವಿರೋಧಿ ಶಕ್ತಿಗಳು ತಮ್ಮ ವಕ್ರ ದೃಷ್ಟಿ ಬೀರಿವೆ. ಅಲ್ಲದೆ ನಿಷೇಧಿತ ಪಿಎಫ್‌ಐ ಸಂಘಟನೆ ರಾಜಕೀಯ ಮುಖವಾಣಿ ಎಸ್‌ಡಿಪಿಐ ಮೂಲಕ ಚಟುವಟಿಕೆ ವಿಸ್ತರಿಸುತ್ತಿದೆ. ಕಳೆದ 10 ವರ್ಷಗಳಲ್ಲಿ ಜಿಲ್ಲೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಬಂಧನಗಳು ಮತ್ತು ಚಟುವಟಿಕೆಗಳು ಹೆಚ್ಚಾಗಿದೆ’ ಎಂದು ಗಮನಕ್ಕೆ ತಂದರು.
ಕಡಲ ನಗರಿಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಅಂಕುಶ ಹಾಕಬೇಕು ಎಂದೂ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.