ADVERTISEMENT

ಡಿ.ಜೆ.ಹಳ್ಳಿ ಗಲಭೆ: ಎನ್‌ಐಎ ತನಿಖೆ ?

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 16:58 IST
Last Updated 11 ಸೆಪ್ಟೆಂಬರ್ 2020, 16:58 IST
ಡಿಜೆ ಹಳ್ಳಿ ಗಲಭೆ ನಡೆದ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸರು
ಡಿಜೆ ಹಳ್ಳಿ ಗಲಭೆ ನಡೆದ ಸ್ಥಳದಲ್ಲಿ ನಿಯೋಜನೆಗೊಂಡಿರುವ ಪೊಲೀಸರು    

ಬೆಂಗಳೂರು: ‘ಡಿ.ಜೆ. ಹಳ್ಳಿ ಗಲಭೆ ಸಂಬಂಧ ಎರಡು ಪ್ರಕರಣಗ ಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವರ್ಗಾಯಿಸುವ ಸಾಧ್ಯತೆ ಇದೆ’ ಎಂದು ಎನ್‌ಐಎ ಪರ ವಕೀಲರು ಹೈಕೋರ್ಟ್‌ಗೆ ಶುಕ್ರವಾರ ಮಾಹಿತಿ ನೀಡಿದರು.

ಗಲಭೆ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ (ಯುಎಪಿಎ) ದಾಖಲಾಗಿರುವ ಪ್ರಕರಣಗಳನ್ನು ಎನ್‌ಐಎಗೆ ವರ್ಗಾಯಿಸುವ ಬಗ್ಗೆ ಮೌಖಿಕ ಸೂಚನೆ ದೊರೆತಿದೆ. ಸೆ.18ರೊಳಗೆ ಆದೇಶ ಹೊರ ಬೀಳುವ ಸಾಧ್ಯತೆ ಇದೆ’ ಎಂದು ವಿಶೇಷ ಪಬ್ಲಿಕ್ ಪ್ಯಾಸಿಕ್ಯೂಟರ್ ಪ್ರಸನ್ನಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT