ADVERTISEMENT

ಮಂಗಳೂರಿನಲ್ಲಿ ಎನ್‍ಐಎ ದಾಳಿ: ಎಂಜಿನಿಯರಿಂಗ್ ವಿದ್ಯಾರ್ಥಿ ವಶ

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 11:32 IST
Last Updated 5 ಜನವರಿ 2023, 11:32 IST
   

ಉಳ್ಳಾಲ (ದಕ್ಷಿಣ ಕನ್ನಡ): ಕೊಣಾಜೆಯ ನಡುಪದವು ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು, ಒಬ್ಬ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

‘ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ, ಉಡುಪಿಯ ರಿಹಾನ್ ಶೇಖನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಸ್ಫೋಟಕವನ್ನು ಬಳಸುತ್ತಿದ್ದ ಪ್ರಕರಣದಲ್ಲಿ ಐಸಿಸ್ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿದ ಆರೋಪದಲ್ಲಿ ಬಂಧಿತನಾಗಿರುವ ಮಾಝ್ ಮುನೀರ್ ನೊಂದಿಗೆ ನಿರಂತರ ಸಂಪರ್ಕ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿದ್ದ ಆರೋಪ ಈ ವಿದ್ಯಾರ್ಥಿ ಮೇಲಿದೆ‘ ಎಂದು ಮೂಲಗಳು ತಿಳಿಸಿವೆ.

ಮಾಝ್ ಮುನೀರ್ ಕೊಣಾಜೆಯ ನಡುಪದವು ಸಮೀಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಟೆಕ್ ಓದುತ್ತಿದ್ದ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.