ADVERTISEMENT

ನಿಗಮ ಮಂಡಳಿ ನೇಮಕ ರದ್ದು ಪ್ರಶ್ನಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 15:04 IST
Last Updated 22 ಅಕ್ಟೋಬರ್ 2018, 15:04 IST

ಬೆಂಗಳೂರು: ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದು ಪಡಿಸಿದ ಮೈತ್ರಿ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್‌ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

‘ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ವಿಚಾರದಲ್ಲಿ ಸರ್ಕಾರಕ್ಕೆ ತನ್ನದೇ ಆದ ವಿವೇಚನಾಧಿಕಾರವಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದ ನಂತರ ಕೈಗೊಳ್ಳಲಾದ ತೀರ್ಮಾನ ಪ್ರಶ್ನಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಅಧ್ಯಕ್ಷ ಎ.ಮುನಿಯಪ್ಪ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಆರ್. ವೆಂಕಟೇಶ್ ಸೇರಿದಂತೆ ನಾಲ್ವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.