ADVERTISEMENT

ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದ ನಿಖಿಲ್‌ ಕುಮಾರಸ್ವಾಮಿ

ಬೀದರ್‌ನಲ್ಲಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2023, 16:50 IST
Last Updated 17 ಸೆಪ್ಟೆಂಬರ್ 2023, 16:50 IST
<div class="paragraphs"><p>ನಿಖಿಲ್‌ ಕುಮಾರಸ್ವಾಮಿ</p></div>

ನಿಖಿಲ್‌ ಕುಮಾರಸ್ವಾಮಿ

   

ಬೀದರ್‌: ‘ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿ ಓಡಾಡಿ ಕೆಲಸ ಮಾಡುತ್ತೇನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಮಗ, ನಟ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಭಾನುವಾರ ನಡೆದ ಅವರ ಗನ್‌ಮ್ಯಾನ್‌ ಮದುವೆಯಲ್ಲಿ ಭಾಗವಹಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲೆಲ್ಲಿ ಸ್ಪರ್ಧಿಸಬೇಕು ಎನ್ನುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಬಿಜೆಪಿ ಜತೆಗಿನ ಮೈತ್ರಿ ಕುರಿತು ಜೆಡಿಎಸ್‌ ಹಿರಿಯರಾದ ಎಚ್‌.ಡಿ. ದೇವೇಗೌಡ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಅವರು ಶೀಘ್ರ ತೆರೆ ಎಳೆಯುತ್ತಾರೆ ಎಂದರು.

ADVERTISEMENT

ಒಂದು ಪ್ರಾದೇಶಿಕ ಪಕ್ಷ ಕಟ್ಟಿ ಅದನ್ನು ಮುನ್ನಡೆಸಿಕೊಂಡು ಹೋಗುವುದು ಬಹಳ ಕಷ್ಟದ ಕೆಲಸ. ದೇವಗೌಡರ ಶ್ರಮ, ಉತ್ಸಾಹಿ ಕಾರ್ಯಕರ್ತರಿಂದ ಪಕ್ಷ ನಡೆಯುತ್ತಿದೆ. ಕುಮಾರಸ್ವಾಮಿ ಅವರು ಯಶಸ್ವಿಯಾಗಿ ಪಕ್ಷ ನಡೆಸಿಕೊಂಡು ಹೋಗುತ್ತಿದ್ದಾರೆ. ಅನೇಕ ಹಿರಿಯ ನಾಯಕರ ಕೊಡುಗೆ ಪಕ್ಷಕ್ಕಿದೆ. ನಾನು ಒಂದು ವಾರದಿಂದ ಸಿನಿಮಾ ಶೂಟಿಂಗ್‌ನಲ್ಲಿ ಮಗ್ನನಾಗಿದ್ದೇನೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.