ADVERTISEMENT

ರಾಜಕೀಯ ಲಾಭಕ್ಕೆ ನೀರವ್ ಮೋದಿ ಬಂಧನ; ಮೊಯಿಲಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 19:34 IST
Last Updated 21 ಮಾರ್ಚ್ 2019, 19:34 IST
ವೀರಪ್ಪ ಮೊಯಿಲಿ
ವೀರಪ್ಪ ಮೊಯಿಲಿ   

ತುಮಕೂರು: ‘ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ನೀರವ್ ಮೋದಿಯನ್ನು ಇಷ್ಟು ದಿನ ಬಂಧನ ಮಾಡದೇ ಸುಮ್ಮನಿದ್ದು, ಈಗ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಬಂಧಿಸಿರುವುದು ರಾಜಕೀಯ ಪ್ರೇರಿತವಾಗಿದೆ’ ಎಂದು ಸಂಸದ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಆರೋಪಿಸಿದರು.

ಗುರುವಾರ ಸಿದ್ಧಗಂಗಾಮಠದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಬಹುಕೋಟಿ ವಂಚನೆ ಆರೋಪಿ ನೀರವ್ ಮೋದಿ ಬಂಧನಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳದೇ ಇದ್ದದ್ದು ಆತ ವಿದೇಶದಲ್ಲಿ ತಲೆಮರೆಸಿಕೊಳ್ಳಲು ಕಾರಣವಾಯಿತು. ಬಳಿಕ ಆತನ ಬಂಧನಕ್ಕೆ ನಿರೀಕ್ಷಿತ ಮಟ್ಟದ ಪ್ರಯತ್ನ ಮಾಡಿರಲಿಲ್ಲ. ಈಗ ಚುನಾವಣೆ ಘೋಷಣೆ ಬಳಿಕ ಬಂಧಿಸಿ ರಾಜಕೀಯ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.