ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ನಿವಾಸಕ್ಕೆ ತೆರಳಿದ ನಿರ್ಮಲಾ ಸೀತಾರಾಮನ್ ಅವರು ದೇವೇಗೌಡರ ಯೋಗಕ್ಷೇಮ ವಿಚಾರಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಸಹಕಾರ ಕುರಿತು ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇತ್ತೀಚೆಗೆ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿದ್ದರು. ಮರುದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ,ಜಗದೀಶ್ ಶೆಟ್ಟರ್ ಅವರು ಕೂಡ ಪದ್ಮನಾಭನಗರಕ್ಕೆ ತೆರಳಿ ಜೆಡಿಎಸ್ ವರಿಷ್ಠರ ಆರೋಗ್ಯ ವಿಚಾರಿಸಿ ಬಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.