ಕೋಲಾರ: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಜಿಲ್ಲೆಗೆ ಬಂದಿರುವ 18 ಮಂದಿಯನ್ನು ಜಿಲ್ಲಾಡಳಿತ ಮಂಗಳವಾರ ರಾತ್ರಿ ಪತ್ತೆ ಮಾಡಿದೆ.
ಮಾರ್ಚ್ 20ರಂದು ಜಿಲ್ಲೆಗೆ ಬಂದಿದ್ದ ಇವರು ಬಂಗಾರಪೇಟೆ ತಾಲ್ಲೂಕಿನ ಭೀಮಗಾನಹಳ್ಳಿ ಮತ್ತು ಗೊಲ್ಲಹಳ್ಳಿಯಲ್ಲಿ ಉಳಿದುಕೊಂಡಿದ್ದರು. ಇವರಲ್ಲಿ 10 ಮಂದಿ ಮೂಲತಃ ಮಹಾರಾಷ್ಟ್ರದ ಮುಂಬೈನವರು ಮತ್ತು 8 ಮಂದಿ ದೆಹಲಿಯವರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ 18 ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಜಿಲ್ಲಾ ಕೇಂದ್ರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಇರಿಸಲಾಗಿದೆ. ಇವರೆಲ್ಲರ ಕಫಾ ಮತ್ತು ರಕ್ತ ಮಾದರಿ ಸಂಗ್ರಹಿಸಿ ಹೆಚ್ಚಿನ ಪರಿಶೀಲನೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ನಡೆದಿದೆ.
ಈ 18 ಮಂದಿಯೂ ಧರ್ಮ ಪ್ರಚಾರಕ್ಕಾಗಿ ಫೆ.20ರಿಂದ ದೇಶದ ವಿವಿಧೆಡೆ ಸಂಚಾರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.