ADVERTISEMENT

620 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ: ತುಷಾರ್ ಗಿರಿನಾಥ್

ಭೂಮಿಗಾಗಿ ಪ್ರಸ್ತಾವ ಸಲ್ಲಿಸುವಂತೆ ನಗರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 20:03 IST
Last Updated 19 ಡಿಸೆಂಬರ್ 2019, 20:03 IST

ಬೆಂಗಳೂರು: ‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 620 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ಕೂಡಲೇ ಆನೇಕಲ್ ತಾಲ್ಲೂಕಿನಲ್ಲಿ 50 ನಿವೇಶನ
ಗಳಿಗೆ ಪ್ರಸ್ತಾವನೆ ಸಿದ್ಧಪಡಿಸಬೇಕು’ ಎಂದುಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಜಿಲ್ಲಾ ವ್ಯಾಪ್ತಿಯವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆಜಲಮಂಡಳಿ ಕಚೇರಿಯಲ್ಲಿ ಗುರುವಾರ ಪರಿಶೀಲನಾ ಸಭೆ ನಡೆಸಿದರು. ‘ಅಂಗನವಾಡಿ, ವಿದ್ಯಾರ್ಥಿನಿಲಯ, ರುದ್ರಭೂಮಿ, ಘನತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣದಂತಹ ಕಾಮಗಾರಿಗಳಿಗೆ ಅಗತ್ಯವಿರುವ ಭೂಮಿಗಾಗಿ ಇಲಾಖೆಗಳಿಂದ ಕೂಡಲೇ ಅಗತ್ಯ ಪ್ರಸ್ತಾವವನ್ನು ಸಲ್ಲಿಸಬೇಕು’ ಅಧಿಕಾರಿಗಳಿಗೆ ತಿಳಿಸಿದರು. ‘ನಗರಜಿಲ್ಲೆಯಲ್ಲಿ ಭೂಮಿಯ ಲಭ್ಯತೆ ಕಷ್ಟವಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಇಲಾಖೆಗಳ ಕಾರ್ಯಕ್ರಮಗಳಿಗೆ ಅಗತ್ಯವಿರುವ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು’ ಎಂದರು.

‘ಗುರುತಿಸಲಾಗಿರುವ ಭೂಮಿಯನ್ನು ಕಂದಾಯ, ನಗರಸಭೆ, ಪಾಲಿಕೆ ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹಸ್ತಾಂತರ ಮಾಡುವ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆಯಬೇಕು.ರುದ್ರಭೂಮಿಗಾಗಿ ಅಗತ್ಯವಿರುವ ನಿವೇಶನವನ್ನು ಆದ್ಯತೆ ಮೇರೆಗೆ ಮಂಜೂರು ಮಾಡಿ, ಅಲ್ಲಿ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು’ ಎಂದು ಕಂದಾಯ ಇಲಾಖೆಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ‘ಭೂ ಒಡೆತನ ಯೋಜನೆಯಡಿಯ ಪ್ರಗತಿ ಬಗ್ಗೆ ಸಂಪೂರ್ಣಮಾಹಿತಿಯನ್ನು ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ, ಜಿ.ಪಂ ಸಿಇಒ ಶಿವರಾಮೇಗೌಡ, ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.