ADVERTISEMENT

ಕೋವಿಡ್-19 ಭೀತಿ: ಮಹಾರಾಷ್ಟ್ರಕ್ಕೆ ಸಾರಿಗೆ ಬಸ್‌ ಸಂಚಾರ ರದ್ದು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 15:23 IST
Last Updated 18 ಮಾರ್ಚ್ 2020, 15:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ಮಹಾರಾಷ್ಟ್ರದ ವಿವಿಧೆಡೆ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಜಾಸ್ತಿಯಾಗುತ್ತಿರುವುದರಿಂದಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಆರು ಜಿಲ್ಲೆಗಳಿಂದ ಮಹಾರಾಷ್ಟ್ರ ರಾಜ್ಯಕ್ಕ ತೆರಳುವ ಎಲ್ಲ ಬಸ್‌ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಈ ಸಂಬಂಧ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದರು. ಇದನ್ನು ಆಧರಿಸಿ ಆದೇಶ ಹೊರಡಿಸಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜಹೀರಾ ನಸೀಂ ಅವರು ವಿವಿಧ ಜಿಲ್ಲೆಗಳ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪತ್ರ ಬರೆದಿದ್ದು, ತಕ್ಷಣವೇ ಬಸ್‌ ಸಂಚಾರ ರದ್ದುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.

ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ವ್ಯಾಪ್ತಿಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹೊಂದಿದ್ದು, ಈ ಜಿಲ್ಲೆಗಳಿಂದ ನಿತ್ಯ ನೂರಕ್ಕೂ ಅಧಿಕ ಬಸ್‌ಗಳು ಮಹಾರಾಷ್ಟ್ರದ ಮುಂಬೈ, ಪುಣೆ, ಸೊಲ್ಲಾಪುರ, ಕೊಲ್ಹಾಪುರ, ಜತ್ತ, ಅಕ್ಕಲಕೋಟ, ಗಡಹಿಂಗ್ಲಜ, ಸಾತಾರ, ಸಾಂಗ್ಲಿ, ಚಿಪಳೂಣ, ಕರಾಡ, ಮಹಾಬಲೇಶ್ವರ ಸೇರಿದಂತೆ ಪ್ರಮುಖ ನಗರಗಳಿಗೆ ಸಂಚರಿಸುತ್ತವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.