ADVERTISEMENT

ಮೈತ್ರಿಯಲ್ಲಿ ಸ್ಪಷ್ಟತೆ ಇಲ್ಲ: ಪ್ರತಾಪಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 5 ಜುಲೈ 2019, 12:12 IST
Last Updated 5 ಜುಲೈ 2019, 12:12 IST

ರಾಯಚೂರು: ‘ಸಮ್ಮಿಶ್ರ ಸರ್ಕಾರದೊಂದಿಗೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡ ನಂತರ ಶಾಸಕರಲ್ಲಿ ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಸ್ಪಷ್ಟತೆ ಇಲ್ಲ. ಹೀಗಾಗಿ ಭಿನ್ನಾಭಿಪ್ರಾಯಗಳು ಕೇಳಿ ಬರುತ್ತಿವೆ. ಈ ಬಗ್ಗೆ ಕಾಂಗ್ರೆಸ್‌ ಮುಖಂಡರು ಸ್ಪಷ್ಟತೆ ಕಂಡುಕೊಳ್ಳುವ ಅಗತ್ಯವಿದೆ’ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿರಿಯ ನಾಯಕರಲ್ಲಿ ಸಮನ್ವಯತೆ ಇಲ್ಲ ಎನ್ನುವ ಮಾತು ಮೇಲಿಂದ ಮೇಲೆ ಕೇಳಿ ಬರುತ್ತಿದೆ. ಸಮನ್ವಯತೆ ಇಲ್ಲದಿದ್ದರೆ ಸರ್ಕಾರದಲ್ಲಿ ಏಕೆ ಮುಂದುವರಿಯಬೇಕು’ ಎಂದು ವರಿಷ್ಠರಿಗೆ ಪ್ರಶ್ನೆ ಹಾಕಿದರು.

‘ಶಾಸಕ ರಮೇಶ ಜಾರಕಿಹೊಳಿ ಅವರು ವೈಯಕ್ತಿಕವಾಗಿ ಆಪ್ತರಾಗಿರುವುದರಿಂದ ನಾನು ರಾಜೀನಾಮೆ ನೀಡುತ್ತೇನೆ ಎನ್ನುವ ಊಹಾಪೋಹಗಳು ಕೇಳಿಬಂದಿವೆ. ಆದರೆ, ಕ್ಷೇತ್ರದ ಜನರ ತೀರ್ಮಾನಕ್ಕೆ ಬದ್ಧವಾಗಿ ನಡೆದುಕೊಳ್ಳುತ್ತೇನೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.