ADVERTISEMENT

ಮಾಧ್ಯಮದವರಿಗೆ ಕೋವಿಡ್ 19 ತಪಾಸಣೆ: ಕೊರೊನಾ ಸೋಂಕು ಪತ್ತೆಯಾಗಿಲ್ಲ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2020, 13:31 IST
Last Updated 27 ಏಪ್ರಿಲ್ 2020, 13:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ಮಾಧ್ಯಮದ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆರೋಗ್ಯ ಇಲಾಖೆಯಿಂದ ಕೊರೊನಾ ಸೋಂಕು ತಪಾಸಣೆ ನಡೆಸಿದ್ದು ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಇಲಾಖೆಯ ಜಂಟಿ ನಿರ್ದೇಶಕ ಡಿ.ಪಿ.ಮುರಳಿಧರ್ ಮಾಹಿತಿ ನೀಡಿದ್ದು, ಇಂದಿರಾನಗರದ ಸರ್ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸುವವರಿಗಾಗಿ ಶನಿವಾರ ತಪಾಸಣೆ ನಡೆಸಲಾಗಿತ್ತು.ಅವರಲ್ಲಿ ಗಂಟಲು ದ್ರವ ಹಾಗೂ ರಕ್ತಪರೀಕ್ಷೆಗಳನ್ನು ನಡೆಸಲಾಗಿತ್ತು. ಇವುಗಳ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

ಇದುವರೆಗೆ 408 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಇನ್ನೂ ತಪಾಸಣಾ ಶಿಬಿರಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.