ADVERTISEMENT

ಕರ್ನಾಟಕಕ್ಕಿಲ್ಲ ಕೊರೋನಾ ಭಯ, ವದಂತಿ ಹಬ್ಬಿದರೆ ಕಠಿಣ ಕ್ರಮ: ಸರ್ಕಾರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 8:49 IST
Last Updated 4 ಮಾರ್ಚ್ 2020, 8:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು (ಕೋವಿಡ್‌19) ಭೀತಿ ಇಲ್ಲ. ಈ ವಿಚಾರವಾಗಿ ವದಂತಿ ಹಬ್ಬಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.

ಕೊರೊನಾ ಕುರಿತು ಸುಳ್ಳು ಮಾಹಿತಿ ಹಬ್ಬಿಸುವವರ ವಿರುದ್ಧ ನೆರೆಯ ಕೇರಳ ಹಾಗೂ ತೆಲಂಗಾಣದಲ್ಲಿ ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಕೊಳಲಾಗುವುದು ಎಂದು ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಇತ್ತೀಚೆಗೆ ಅವರು ಹೈದರಾಬಾದ್‌ಗೆ ತೆರಳಿದ ಬಳಿಕ ಪತ್ತೆಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದ ಸರ್ಕಾರ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.