ADVERTISEMENT

ಮೂವರಲ್ಲೂ ಕೊರೊನಾ ಸೋಂಕು ಇಲ್ಲ: ಡಿಎಚ್‌ಒ

ಪಂಜಾಬ್‌ ವೃದ್ಧನ ಸಾವಿಗೆ ಕೋವಿಡ್‌ ಕಾರಣವಲ್ಲ: ಡಿಸಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 12:28 IST
Last Updated 14 ಮಾರ್ಚ್ 2020, 12:28 IST

ಉಡುಪಿ: ಶಂಕಿತ ಕೊರೊನಾಗೆ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಿ ವಿದ್ಯಾರ್ಥಿ, ಶಿವಮೊಗ್ಗದ ಸಾಗರದ ಮಹಿಳೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಕೆನಡಾದಿಂದ ಮರಳಿದ್ದ ವ್ಯಕ್ತಿಯ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ಕೆಎಂಸಿಯಲ್ಲಿ ದಾಖಲಾಗಿರುವ ಮೂವರು ವಿದೇಶಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಸಾಗರದ ಮಹಿಳೆಗೆ ಮೂರು ಬಾರಿ ಪರೀಕ್ಷೆಗೊಳಪಡಿಸಿದಾಗಲೂ ಸೋಂಕು ಕಂಡುಬಂದಿಲ್ಲ ಎಂದು ಡಿಎಚ್‌ಒ ತಿಳಿಸಿದರು.

ಈಚೆಗೆ ಜರ್ಮನಿಯಿಂದ ಕಾಪುವಿಗೆ ಬಂದಿದ್ದ ವ್ಯಕ್ತಿಗೆ ಶೀತ, ಕೆಮ್ಮು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು.‌

ADVERTISEMENT

ಕೋವಿಡ್‌ನಿಂದ ಸಾವನ್ನಪ್ಪಿಲ್ಲ: ಡಿಸಿ

ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಪಂಜಾಬ್‌ನ 82 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕೋವಿಡ್‌ ಸೋಂಕು ಸಾವಿಗೆ ಕಾರಣವಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ನವೆಂಬರ್‌ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. ಸಾವಿನ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರೆಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ತಾಯ್ನಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.