ಉಡುಪಿ: ಜೂನ್ 8ರ ನಂತರ ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಆದರೆ, ಕೃಷ್ಣಮಠದಲ್ಲಿ 20 ಅಥವಾ 30 ದಿನಗಳ ನಂತರ ಪರಿಸ್ಥಿತಿ ನೋಡಿಕೊಂಡು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದರು.
ದರ್ಶನಕ್ಕೆ ಅವಕಾಶ ನೀಡಿದ ಕೂಡಲೇ ಬೆಂಗಳೂರು ಸೇರಿದಂತೆ ದೂರದೂರುಗಳಿಂದ ಭಕ್ತರು ಕೃಷ್ಣಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಭಕ್ತರ ಆರೋಗ್ಯ ಹಾಗೂ ಮಠದ ಸಿಬ್ಬಂದಿಯ ಆರೋಗ್ಯದ ದೃಷ್ಟಿಯಿಂದ ತಡವಾಗಿ ದೇವಸ್ಥಾನದ ಬಾಗಿಲು ತೆರೆಯಲು ನಿರ್ಧರಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.
ಕೃಷ್ಣಮಠದಲ್ಲಿ ಅನೂಚಾನವಾಗಿ ಕೆಲವು ಪದ್ಧತಿಗಳು ನಡೆದುಕೊಂಡು ಬಂದಿದ್ದು, ಯತಿಗಳೇ ಪೂಜೆ ಮಾಡುತ್ತಿದ್ದಾರೆ. ಹಾಗಾಗಿ, ಪರಂಪರೆ ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.