ಮೈಸೂರು: ‘ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಈಗ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಜನಮನ ಪ್ರತಿಷ್ಠಾನದಿಂದ ನಗರದ ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಸಿದ್ದರಾಮಯ್ಯ ಆಡಳಿತ: ನೀತಿ–ನಿರ್ಧಾರ’ ಗ್ರಂಥ ಬಿಡುಗಡೆ ಹಾಗೂ ಸಂವಾದ ಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಅಭಿಮಾನಿಗಳು ಸೇರಿದಂತೆ ಯಾರು ಏನೇ ಹೇಳಿದರೂ ಕೊನೆಯದಾಗಿ ನಿರ್ಧರಿಸುವುದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್’ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.