ADVERTISEMENT

ವಿದ್ಯುತ್, ಹಾಲಿನ ದರ ಏರಿಕೆ ಇಲ್ಲ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2022, 18:54 IST
Last Updated 22 ಜನವರಿ 2022, 18:54 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ನೀರು, ಹಾಲು ಮತ್ತು ವಿದ್ಯುತ್‌ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಅವಸರದ ತೀರ್ಮಾನಗಳನ್ನು ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನೀರಿನ ದರ ಏರಿಕೆಗೆ ಬೆಂಗಳೂರು ಜಲಮಂಡಳಿ ಪ್ರಸ್ತಾವ ಸಲ್ಲಿಸಿದೆ. ‘ವಿದ್ಯುತ್‌ ದರ ಏರಿಕೆ ಅನಿವಾರ್ಯ’ ಎಂದು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಶುಕ್ರವಾರ ಹೇಳಿಕೆ ನೀಡಿದ್ದರು. ಹಾಲಿನ ದರ ಹೆಚ್ಚಳ ಮಾಡುವಂತೆ ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್‌) ಕೂಡ ಬೇಡಿಕೆ ಇಟ್ಟಿದೆ.

ದರ ಏರಿಕೆ ಪ್ರಸ್ತಾವವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತೀವ್ರವಾಗಿ ವಿರೋಧಿಸಿದ್ದರು.

ADVERTISEMENT

ಅದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ‘ನೀರು, ಹಾಲು ಮತ್ತು ವಿದ್ಯುತ್‌ ದರ ಏರಿಕೆಗೆ ಪ್ರಸ್ತಾವಗಳು ಬಂದಿರುವುದು ನಿಜ. ಆದರೆ, ದರ ಏರಿಕೆ ಮಾಡಲಾಗುತ್ತಿದೆ ಎಂಬುದು ಕೇವಲ ಊಹಾಪೋಹ. ಎಲ್ಲ ಆಯಾಮಗಳಲ್ಲೂ ಚರ್ಚೆ ಮಾಡಿ ತೀರ್ಮಾನಿಸಲಾಗುವುದು’ ಎಂದರು.

‘ಆಡಳಿತದಲ್ಲಿ ಇವೆಲ್ಲವೂ ಇದ್ದೇ ಇರುತ್ತವೆ. ಆದರೆ, ಯಾವುದನ್ನೂ ಅವಸರದಲ್ಲಿ ನಿರ್ಧರಿಸುವುದಿಲ್ಲ. ಈವರೆಗೆ ಯಾವುದೇ ತೀರ್ಮಾನಗಳೂ ಆಗಿಲ್ಲ. ಅಂತಿಮವಾಗಿ ಜನರ ಅಭಿಪ್ರಾಯ ಪಡೆದು ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.