ADVERTISEMENT

ಮೀಸಲಾತಿ| ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2023, 11:26 IST
Last Updated 25 ಏಪ್ರಿಲ್ 2023, 11:26 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಧಾರವಾಡ: ಮುಸ್ಲಿಮರ ಮೀಸಲಾತಿ ಕುರಿತು ಸುಪ್ರೀಂ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ' ಎಂದು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಾಲ್ಲೂಕಿನ ಉಪ್ಪಿನಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

ವಿಚಾರಣೆ ಮುಂದಕ್ಕೆ

ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮೇ 9 ಕ್ಕೆ ಮುಂದೂಡಿದ್ದು, ಕೋರ್ಟ್‌ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.

ಕಾಂಗ್ರೆಸ್ ಸುಳ್ಳು ಹೇಳುತ್ತಿದೆ

ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಆಗಿಲ್ಲ ಎಂದು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 ಉಪಜಾತಿಗಾಳಿವೆ. ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ. ಅಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು. ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ. ಜತೆಗೆ ಮಾನದಂಡಗಳೂ ಬದಲಾಗಿಲ್ಲ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.