ADVERTISEMENT

ಸಂಪುಟ ವಿಸ್ತರಣೆ ಚರ್ಚೆ ಆಗಿಲ್ಲ: ಸಿಎಂ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2021, 22:30 IST
Last Updated 26 ಆಗಸ್ಟ್ 2021, 22:30 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ    

ಬೆಂಗಳೂರು: ಸಂಪುಟ ವಿಸ್ತರಣೆ ಮತ್ತು ಸಚಿವರ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್‌ ಜತೆ ಚರ್ಚೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ದೆಹಲಿಯಲ್ಲಿ ಅರುಣ್‌ಸಿಂಗ್‌ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯ ರಾಜಕೀಯ ಮತ್ತು ಪಕ್ಷದ ಸಂಘಟನೆಯ ವಿಚಾರವಾಗಿ ಮಾತ್ರ ಮಾತುಕತೆ ನಡೆಸಿದ್ದೇನೆ’ ಎಂದು ಹೇಳಿದರು.

‘ನಾಲ್ಕು ಸಚಿವ ಸ್ಥಾನ ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಸಿದ್ದೀರಾ’ ಎಂಬ ಪ್ರಶ್ನೆಗೆ, ‘ಆ ಬಗ್ಗೆ ಮುಂದೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಚರ್ಚಿಸಲಾಗುವುದು. ಅದಕ್ಕಾಗಿ ಇನ್ನೊಮ್ಮೆ ಬರುತ್ತೇನೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.