ADVERTISEMENT

ಆರೋಗ್ಯ ತುರ್ತುಸ್ಥಿತಿಯಲ್ಲಿ ದಾಖಲೆ ಬೇಡ: ಸುಧಾಕರ್‌

‘ಅಮಾನವೀಯವಾಗಿ ವರ್ತಿಸಿದರೆ ವಜಾಗೊಳಿಸಲು ಕ್ರಮ’

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 20:49 IST
Last Updated 4 ನವೆಂಬರ್ 2022, 20:49 IST
   

ಬೆಂಗಳೂರು: ‘ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ದಾಖಲೆಗಳು ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು’ ಎಂದುಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳ ಜತೆ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆಗಳನ್ನು ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ’ ಎಂದು ವಿವರಿಸಿದರು.

‘ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿ
ಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತು ಮಾತ್ರವಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು’ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗುವುದು. ನಂತರ, ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿಗೆ ಮಸೂದೆಯನ್ನು ಮಂಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.