ನವದೆಹಲಿ: ಮಂಗಳೂರಿನಲ್ಲಿ ಪ್ರತ್ಯೇಕವಾಗಿ ಮೀನುಗಾರಿಕಾ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ತಿಳಿಸಿದರು.
ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಚಿವಾಲಯವು ವಿವಿಧ ಮೀನುಗಾರಿಕೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ ₹1,056.34 ಕೋಟಿ ಮಂಜೂರು ಮಾಡಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.