ADVERTISEMENT

5 ರಾಜ್ಯಗಳಿಗೆ ವಿಮಾನ ಸಂಚಾರ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 28 ಮೇ 2020, 20:34 IST
Last Updated 28 ಮೇ 2020, 20:34 IST
ಬೆಂಗಳೂರು ವಿಮಾನ ನಿಲ್ದಾಣ
ಬೆಂಗಳೂರು ವಿಮಾನ ನಿಲ್ದಾಣ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರಿಂದ ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳಿಗೆ ಕರ್ನಾಟಕದ ಜತೆ ಸಂಪರ್ಕಿಸುವವಿಮಾನಗಳ ಸಂಚಾರವನ್ನು ತಕ್ಷಣದಿಂದಲೇ ನಿರ್ಬಂಧಿಸಲಾಗಿದೆ.

ಮುಂದಿನ ಆದೇಶವನ್ನು ಹೊರಡಿಸುವವರೆಗೂ ಈ ನಿರ್ಬಂಧ ಜಾರಿಯಲ್ಲಿ ಇರುತ್ತದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಆದರೆ, ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಕಚೇರಿ, ವಿಮಾನ ಸಂಚಾರ ರದ್ದುಪಡಿಸುವುದಿಲ್ಲ. ಬದಲಿಗೆ ವಿಮಾನಗಳ ಹಾರಾಟದ ಸಂಖ್ಯೆ ಕಡಿಮೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದೆ.

ADVERTISEMENT

ಮಹಾರಾಷ್ಟ್ರದಿಂದ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಕಷ್ಟವಾಗುತ್ತದೆ. ಪರೀಕ್ಷೆ ಮಾಡಿ ಕ್ವಾರಂಟೈನ್‌ನಲ್ಲಿ ಇಡಲು ಸ್ಥಳವೇ ಇಲ್ಲವಾಗಿದೆ. ಈಗ ಕ್ವಾರಂಟೈನ್‌ನಲ್ಲಿ ಇರುವವರು ಅವಧಿ ಮುಗಿಸಿ ಮನೆಗೆ ಹೋದ ಬಳಿಕ ಹೊರ ರಾಜ್ಯಗಳಿಂದ ಜನರನ್ನು ಕರೆ ತರಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.