ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 12:29 IST
Last Updated 18 ಆಗಸ್ಟ್ 2020, 12:29 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ    

ಬೆಳಗಾವಿ: ‘ಜಿಲ್ಲೆಯಲ್ಲಿ ಈವರೆಗೂ ಪ್ರವಾಹ ಬಂದಿಲ್ಲ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಪ್ತ ನದಿಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿದೆ. ಕೃಷ್ಣಾ ನದಿಗೆ 1.90 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯುಸೆಕ್‌ ನೀರು ಬಿಟ್ಟರಷ್ಟೆ ನದಿ ಪಾತ್ರದಲ್ಲಿ ಪ್ರವಾಹದ ಆತಂಕ ಉಂಟಾಗುತ್ತದೆ’ ಎಂದು ತಿಳಿಸಿದರು.

‘ಪ್ರವಾಹ ನಿಭಾಯಿಸಲು ಜಿಲ್ಲಾಡಳಿತ ಎಲ್ಲ ಕ್ರಮ ಕೈಗೊಂಡಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಜಮೀನುಗಳಿಗೆ ನೀರು ನುಗ್ಗಿದೆ. ಈ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಬೆಳೆ ಕಳೆದುಕೊಳ್ಳುವವರಿಗೆ ಪರಿಹಾರ ಒದಗಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.